Kannada NewsKarnataka NewsLatest

*ಮಠದಲ್ಲಿಯೇ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ: ಸ್ವಾಮೀಜಿಯೊಬ್ಬರು ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವೇಂದ್ರಪ್ಪ (58) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ವಾಮೀಜಿ.

Home add -Advt

ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗುಳಗುಳಿ ಗ್ರಾಮದವರಾದ ದೇವೇಂದ್ರಪ್ಪ, ಕಳೆದ ಎರಡು ದಶಕಗಳಿಂದ ಸಿಂಧನೂರಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ನಡುವೆ ವೈರಾಗ್ಯ ಜೀವನದತ್ತ ಮುಖ ಮಾಡಿ, ಬಸಾಪುರ ಗ್ರಾಮದಲ್ಲಿ ಶಿವಾನಂದ ಜಗದ್ಗುರು ನಾಮಧಾರಿ ಮಠವನ್ನು ಸ್ಥಾಪಿಸಿ, ಸ್ವಾಮೀಜಿಯಾಗಿ ಗುರುತಿಸಿಕೊಂಡಿದ್ದರು. ಖಾವಿ ವಸ್ತ್ರ ಧರಿಸಿ ಜನರಿಗೆ ಧಾರ್ಮಿಕ ಪ್ರವಚನ ನೀಡುತ್ತಿದ್ದರು.

ಆದರೆ, ಏಕಾಏಕಿ ಮಠದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಗ್ರಾಮಸ್ಥರು ಹಾಗೂ ಭಕ್ತರು ಆಘಾತಗೊಳ್ಳುವಂತೆ ಮಾಡಿದೆ. ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ.

ಘಟನಾ ಸ್ಥಳಕ್ಕೆ ತುರುವಿಹಾಳ ಠಾಣೆ ಪಿಎಸ್ಐ ಸುಜಾತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ರಮೇಶ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.


Related Articles

Back to top button