Latest

ನಾಪತ್ತೆಯಾಗಿದ್ದ ಮಾಜಿ ಶಾಸಕನ ಮೊಮ್ಮಕ್ಕಳು ಶವವಾಗಿ ಪತ್ತೆ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವಾಗಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

9 ವರ್ಷದ ವರುಣ್ ಹಾಗೂ 5 ವರ್ಷದ ಸಣ್ಣಯ್ಯ ಮೃತ ಬಾಲಕರು. ಪೊಲೀಸರು ಹಾಗೂ ಕುಟುಂಬಸ್ಥರು ನಿನ್ನೆ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದರೂ ಬಾಲಕರು ಪತ್ತೆಯಾಗಿರಲಿಲ್ಲ. ಇದೀಗ ಮಕ್ಕಳ ಶವ ಹಳ್ಳದಲ್ಲಿ ಪತ್ತೆಯಾಗಿದ್ದು, ಸ್ನಾನಕ್ಕೆಂದು ಹೋದ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

Home add -Advt

ಸಿರಿವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button