Karnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆಯಿಂದ ತೆರಳುತ್ತಿದ್ದಂತೆ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಕಾರ್ಯಕ್ರಮದ ಬಳಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಇಂದು 151 ಉಚಿತ ಸಾಮೂಹಿಕ ವಿವಾಹ ಸಮಾರಂಭ ಕಾರ್ಯಕ್ರ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ, ನಟ ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು. ಈ ವೇಳೆ ವೇದಿಕೆ ಬಳಿಕ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.

Home add -Advt

ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೇದಿಕೆ ಮೇಲಿಂದ ಡಿಸಿಎಂ ಡಿ.ಕೆ.ಶಿವಕುಮಾರ್​ ತೆರಳಿದ ಬೆನ್ನಲ್ಲೇ ವೇದಿಕೆ ಮೆಟ್ಟಿಲುಗಳ ಬಳಿ ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಇದೇ ವೇಳೆ ಸಚಿವ ಈಶ್ವರ ಖಂಡ್ರೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಘಟನೆ ಕಂಡು ಕೆಲಕಾಲ ಸಚಿವರು ಕಕ್ಕಾಬಿಕ್ಕಿಯಾದರು. ಸಿಬ್ಬಂದಿ ಕೂಡಲೇ ಅವರನ್ನು ಪಕ್ಕಕ್ಕೆ ಕರೆದೊಯ್ದರು.

ಬೆಂಕಿ ಅವಘಡ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹೊಗೆ ಹೆಚ್ಚಾದ ಹಿನ್ನೆಲೆ ಸ್ಥಳೀಯರು ಕೂಡ ಗಾಬರಿಗೊಂಡಿದ್ದರು. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

Related Articles

Back to top button