Kannada NewsKarnataka NewsLatest

*ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ: ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ಇಬ್ಬರು ಬಾಲಕರು ಸಾವು*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ಬಾಲಕರ ಮೇಲೆ ಟ್ರ್ಯಾಕ್ಟರ್ ಚಕ್ರ ಹರಿದು ಹೋಗಿದ್ದು, ಇಬ್ಬರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಹಂಪ್ ನಲ್ಲಿ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷದಿಂದಾಗಿ ಮೂವರು ಬಾಲಕರು ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದಾರೆ. ಇಬ್ಬರು ಬಾಲಕರ ಮೇಲೆಯೇ ಟ್ರ್ಯಾಕ್ಟರ್ ಚಜ್ರ ಹರಿದು ಹೋಗಿದ್ದು, ಬಾಲಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಇನ್ನೋರ್ವ ಗಂಭೀರವಗಿ ಗಾಯಗೊಂಡಿದ್ದಾನೆ.

14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button