ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ:
ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 21 ಸಕ್ಕರೆ ಕಾರ್ಖಾನೆಗಳ ಮೇಲೆ ಬುಧವಾರ ಸಕ್ಕರೆ ಆಯುಕ್ತರ ಕಾರ್ಯಾಲಯದ ವತಿಯಂದ ದಾಳಿ ಮಾಡಲಾಗಿದೆ.
ಸಕ್ಕರೆ ಕಾರ್ಖಾನೆಗಳು ತೂಕದಲ್ಲಿ ಮೋಸ ಮಾಡುತ್ತಿವೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ದಾಳಿಗೆ ನಿರ್ದೇಶನ ನೀಡಿದ್ದರು.
ಬೆಳಗಾವಿ ಜಿಲ್ಲೆಯ 8 ಕಾರ್ಖಾನೆಗಳು, ಬಾಗಲಕೋಟ ಜಿಲ್ಲೆಯ 4 ಕಾರ್ಖಾನೆಗಳು, ವಿಜಾಪುರ ಜಿಲ್ಲೆಯ 4, ಬೀದರ್ ಮತ್ತು ಕಲಬುರ್ಗಿಯ ತಲಾ 2 ಹಾಗೂ ಕಾರವಾರ ಜಿಲ್ಲೆಯ 1 ಕಾರ್ಖಾನೆಯ ಮೇಲೆ ದಾಳಿ ನಡೆದಿದೆ.
ರಾಜ್ಯದಲ್ಲಿ ಏಕಕಾಲಕ್ಕೆ ಇದೇ ಮೊಟ್ಟಮೊದಲ ಬಾರಿಗೆ ಸಕ್ಕರೆ ಆಯುಕ್ತರಿಂದ ಈ ತರಹದ ಬೃಹತ್ ಪರಿಶೀಲನೆ ಕೈಗೊಳ್ಳಲಾಗಿದೆ. ಸಕ್ಕರೆ ಇಲಾಖೆ ಸಿಬ್ಬಂದಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಯ ಸಹಾಯದಿಂದ ದಾಳಿ ನಡೆಸಲಾಗಿದೆ.
ಬುಧವಾರ ಬೆಳಗ್ಗೆ 7 ಗಂಟೆಯಿಂದ ಏಕಕಾಲಕ್ಕೆ ಎಲ್ಲೆಡೆ ದಾಳಿ ನಡೆದಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಕಬ್ಬು ಅಭಿವೃದ್ಧಿ ಆಯುಕ್ತ ಹಾಗೂ ಸಕ್ಕರೆ ನಿರ್ದೇಶಕರು ತಿಳಿಸಿದ್ದಾರೆ.
*ಶಾಸಕ ಅಭಯ್ ಪಾಟೀಲ್ ಗೆ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಹುದ್ದೆ?*
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ