Kannada NewsKarnataka NewsLatest
*ಅಕ್ರಮವಾಗಿ ಯೂರಿಯಾ ಸಂಗ್ರಹ ದಾಳಿ: 4 ಸಾವಿರಕ್ಕೂ ಅಧಿಕ ಚೀಲ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿದ್ದ ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ.
ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.
ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಡ್ವಿನ್ ಎಂಬವರ ಮಾಲೀಕತ್ವದ ಗೋಡೌನ್ನಲ್ಲಿ ರೈತರಿಗೆ ವಿತರಿಸಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಹುನ್ನಾರ ನಡೆದಿರುವುದು ಬೆಳಕಿಗೆ ಬಂದಿದೆ.
ದಾಳಿ ವೇಳೆ ಗೋಡೌನ್ ಮಾಲೀಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




