
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರೈಲ್ವೆ ಇಲಾಖೆ ಕೂಡ ಮುಂದಾಗಿದ್ದು, ರೈಲು ನಿಲ್ದಾಣಗಳಲ್ಲಿ ಹಾಗೂ ರೈಲಿನಲ್ಲಿ ಮಾಸ್ಕ್ ಧರಿಸದಿದ್ದರೆ 500 ದಂಡ ವಿಧಿಸಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ.
ರೈಲ್ವೆ ನಿಲ್ದಾಣ ಹಾಗೂ ರೈಲಿನಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ತೆರಬೇಕಾದ ಸ್ಥಿತಿ ಇದೆ. ಭಾರತೀಯ ರೈಲ್ವೆ ನಿಯಮಗಳು-2021ರ ಕಾಯ್ದೆಯಡಿ 500 ರೂಪಾಯಿವರೆಗೆ ದಂಡ ವಿಧಿಸಲಾಗುತ್ತಿದೆ.
ಮುಂದಿನ 6 ತಿಂಗಳ ಕಾಲ ಈ ನಿಯಮ ಜಾರಿಯಲ್ಲಿರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ