Latest

ಕನ್ನಡಗರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ ಸಚಿವ ವಿ. ಸೋಮಣ್ಣ

ಪ್ರಗತಿವಾಹಿನಿ ಸುದ್ದಿ: ಕನ್ನಡಿಗರು ಇನ್ಮುಂದೆ ಕೇಂದ್ರ ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದು ಘೋಷಣೆ ಮಾಡಿದರು.

ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ. ಈ ಮೂಲಕ 40 ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ. ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕರಿಗೆ ಕಳೆದ ಆಗಸ್ಟ್‌ನಲ್ಲಿಯೇ ಸಚಿವ ಸೋಮಣ್ಣ ಸೂಚನೆ ನೀಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button