Karnataka NewsLatest

*ವಿವಾದದ ಬೆನ್ನಲ್ಲೇ ಮಧ್ಯಪ್ರವೇಶಿಸಿದ ಸಚಿವ ವಿ.ಸೋಮಣ್ಣ*

ಪ್ರಗತಿವಾಹಿನಿ ಸುದ್ದಿ: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವವರು ಮಂಗಳಸೂತ್ರ ಮತ್ತು ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಸೂಚನೆ ನೀಡಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ಬಗ್ಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣಮಧ್ಯಪ್ರದೇಶ ಮಾಡಿದ್ದು, ಪರೀಕ್ಷಾರ್ಥಿಗಳು ಧಾಅರ್ಮಿಕ ಸಂಕತೇಗಳನ್ನು ಹಾಗೂ ಮಂಗಳಸೂತ್ರಗಳನ್ನು ತೆಗೆಯಬೇಕಿಲ್ಲ ಎಂದು ತಿಳಿಸಿದ್ದಾರೆ.

ಪರಿಕ್ಷಾರ್ಥಿಗಳಿಗೆ ಮಂಗಳಸೂತ್ರ, ಜನಿವಾರ, ಯಾವುದೇ ಧಾರ್ಮಿಕ ಸಂಕೇತಗಳನ್ನು ತೆಗೆಸುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪರೀಕ್ಷೆ ಪ್ರವೇಶ ಪತ್ರದಲ್ಲಿ ಧಾರ್ಮಿಕ ಸಂಕೇತ ತೆಗೆಯುವಂತೆ ಉಲ್ಲೇಖಿಸಲಾಗಿತ್ತು. ಇದರ ಬೆನ್ನಲ್ಲೇ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದೀಗ ಸಚಿವ ವಿ.ಸೋಮಣ್ಣ ಸೂಚನೆ ಮೇರೆಗೆ ವಿವಾದಕ್ಕೆ ತೆರೆ ಎಳೆಯಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button