Latest

ರೈಲ್ವೆ ಪ್ಲಾಟ್‌ಫಾರ್ಮ್‌ ಟಿಕೆಟ್ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಲಾಕ್ ಡೌನ್ ಮುಗಿದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಹಲವು ರೈಲು ನಿಲ್ದಾಣಗಳ ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದೆ.

ಕೊರೊನಾ ವೈರಸ್ ಹರಡುವ ಸಾಧ್ಯತೆ ಇರುವುದರಿಂದ ಹೆಚ್ಚು ಜನರು ಸೇರುವುದನ್ನು ನಿಯಂತ್ರಿಸಲು ದೇಶದ 250 ರೈಲ್ವೇ ನಿಲ್ದಾಣಗಳಲ್ಲಿ 10 ರೂ ಇದ್ದ ಪ್ಲಾಟ್‌ಫಾರ್ಮ್‌ ಟಿಕೆಟ್ ಶುಲ್ಕವನ್ನು 50 ರೂ.ಗೆ ಹೆಚ್ಚಿಸಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಶ್ಚಿಮ ರೈಲ್ವೆ ವಲಯದ ಆರು ವಿಭಾಗಗಳಾದ ಮುಂಬೈ, ವಡೋದರಾ, ಅಹಮದಾಬಾದ್, ರತ್ನಂ, ರಾಜ್ಕೋಟ್, ಭಾವನಗರ, ಕೇಂದ್ರ ವಲಯದಲ್ಲಿ ಮುಂಬೈ (ಸಿಎಸ್‌ಟಿ), ಭೂಸಾವಲ್, ನಾಗ್ಪುರ, ಸೋಲಾಪುರ, ಪುಣೆ – ಐದು ವಿಭಾಗಗಳಲ್ಲಿ ಬೆಲೆಗಳನ್ನು ಹೆಚ್ಚಿಸಲಾಗಿದೆ. ಇನ್ನು ದಕ್ಷಿಣ ರೈಲ್ವೆ ವಲಯ ಚೆನ್ನೈ ಮಾತ್ರ ದರ ಹೆಚ್ಚಳ ಮಾಡಲಾಗಿದ್ದು, ಈ ಶುಲ್ಕ ನಾಳೆಯಿಂದ ಜಾರಿಗೆ ಬರಲಿದೆ.

ರಾಜಧಾನಿ ಬೆಂಗಳೂರಿನ ಪ್ರಮುಖ ರೈಲ್ವೆ ನಿಲ್ದಾಣಗಳಾದ, ಸಂಗೊಳ್ಳಿ ರಾಯಣ್ಣ ಮೆಜೆಸ್ಟಿಕ್‌, ಯಶವಂತಪುರ ಮತ್ತು ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ ಫಾರಂ ಟಿಕೆಟ್‌ ದರವನ್ನು 10 ರಿಂದ 50 ರೂ ಗೆ ಏರಿಸಲಾಗಿದೆ. ಟಿಕೆಟ್‌ ಇಲ್ಲದೆ ನಿಲ್ದಾಣ ಪ್ರವೇಶಿಸಿದರೆ ವಿಧಿಸಲಾಗುವ ದಂಡವನ್ನೂ ಹಲವು ಪಟ್ಟು ಏರಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button