Belagavi NewsBelgaum NewsKannada NewsKarnataka News
*ಮತ್ತೆ ಮಳೆ ಅಬ್ಬರ: 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಒಂದು ವಾರಗಳ ಕಾಲ ಅಂದರೆ ಆಗಸ್ಟ್ 27ರವರೆಗೆ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಚಿಕ್ಕಮಗಳೂರು, ಚಿತ್ರದುರ್ಗ, ಕೊಪ್ಪಳ, ರಾಯಚೂರು, ಯಾದಗಿರಿ, ದಾವಣಗೆರೆ, ತುಮಕೂರು, ಕೋಲಾರ, ಕಲಬುರಗಿ, ವಿಜಯನಗರ, ಬಳ್ಳಾರಿ, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.
ಇನ್ನುಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ ಈ ಭಾಗಗಳಲ್ಲಿ 24 ಗಂಟೆಗಳಲ್ಲಿ ಮತ್ತು ಮುಂದಿನ ಒಂದು ವಾರ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ