Politics

*ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿ: NDRF ಪ್ರಕಾರ ಪರಿಹಾರಕ್ಕೆ ವರದಿ ಸಲ್ಲಿಸಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ಸಿದ್ದರಾಮಯ್ಯ ಸೂಚನೆ ನೀಡಿದರು.

ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆಗಳನ್ನು ನೀಡಿದರು.‌

ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಿದರು.

ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ನೀಡಲಾಗಿರುವ ಪರಿಹಾರದ ಕುರಿತು ಮಾಹಿತಿ ಪಡೆದ ಸಿಎಂ ಉಳಿದವರಿಗೆ ತುರ್ತಾಗಿ ಕೊಡಬೇಕು ಎಂದರು‌.

ಕೋಸ್ಟಲ್ ಲೈನ್ ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ದುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ , ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ , ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button