Belagavi NewsBelgaum NewsKannada NewsKarnataka News

*ಇಂದು ನಾಳೆ ಬೆಳಗಾವಿ ಸೇರಿ ಹಲವು ಜಿಲ್ಲೆಯಲ್ಲಿ ಮಳೆಯ ಅಲರ್ಟ್*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇವತ್ತು ಮತ್ತು ನಾಳೆ ರಾಜ್ಯದ ಹಲವೆಡೆ ಮಳೆ ಸುರಿಯಲಿದ್ದು ಬೆಂಗಳೂರಿನಿಂದ ಬೀದರ್‌ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Home add -Advt

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. 

ಉತ್ತರ ಒಳನಾಡಿನ ಅದರಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ವಿಜಯನಗರ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Related Articles

Back to top button