ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈಗಾಗಲೆ ಚಳಿಯ ಎಫೆಕ್ಟ್ ಹಲವು ರಾಜ್ಯಗಳಿಗೆ ತಟ್ಟಿದೆ. ಈ ಮಧ್ಯೆ ಹಲವು ಕಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವೆಂಬರ್ 15ರ ನಂತರ ಉತ್ತರ ಭಾರತದ ಎಲ್ಲಾ ರಾಜ್ಯಗಳು ಚಳಿಯಿಂದ ತತ್ತರಿಸಲಿವೆ. ಈತನ್ಮಧ್ಯೆ ಮುಂದಿನ 5 ದಿನಗಳ ಕಾಲ 6 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು ಈ ಹಿನ್ನೆಲೆ ಆ ರಾಜ್ಯಗಳಿಗೆ ಯೆಲ್ಲೋ ಅಕರ್ಟ್ ನೀಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ನವೆಂಬರ್ 12 ರಿಂದ ನವೆಂಬರ್ 16 ರ ನಡುವೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಬಹುದು. ನವೆಂಬರ್ 12 ರಂದು ಕರಾವಳಿ ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಯಮನ್, ರಾಯಲಸೀಮಾ, ಕಾರೈಕಲ್ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 13 ರಂದು ತಮಿಳುನಾಡು, ಪುದುಚೇರಿ, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಯಮನ್, ಮಾಹೆ, ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 14 ರಂದು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಪುದುಚೇರಿ, ದಕ್ಷಿಣ ಒಳ ಕರ್ನಾಟಕ, ಕರಾವಳಿ ಕರ್ನಾಟಕ ಮತ್ತು ಕಾರೈಕಲ್, ಮಾಹೆ, ಯಮನ್, ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 15 ರಂದು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಪುದುಚೇರಿ, ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಮತ್ತು ಕಾರೈಕಲ್, ಮಾಹೆ, ಯಮನ್, ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 16 ರಂದು ತಮಿಳುನಾಡು, ಪುದುಚೇರಿ, ಕೇರಳ ಮತ್ತು ಕಾರೈಕಲ್, ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 16 ರಂದು ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ