*ಮುಂದಿನ ಐದು ದಿನ ಮಳೆ: ಆರೆಂಜ್, ಯೇಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕದ ಅನೇಕ ಭಾಗದಲ್ಲಿ ಈಗಾಗಲೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಬ್ಬರದ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಮುಂದಿನ 5 ದಿನ ಭಾರೀ ಮಳೆ ಆಗಲಿದೆ. ಬೆಳಗಾವಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಒರಿಸ್ಸಾದಲ್ಲಿ ಉಂಟಾಗಿರುವ ಡಾನಾ ಚಂಡಮಾರುತದ ಕಾರಣ, ಕರ್ನಾಟಕದಲ್ಲಿ ಹಿಂಗಾರು ಮಳೆಯ ಅಬ್ಬರ ಮತ್ತಷ್ಟು ಹೆಚ್ಚಲಿದೆ. ಮುಂದಿನ 5 ದಿನಗಳ ಕಾಲ ಬೆಂಗಳೂರು ಸೇರಿ ಕೋಲಾರ, ಮಂಡ್ಯ ಬೆಳಗಾವಿ, ಧಾರವಾಡ, ಹಾವೇರಿ, ಕಡೂರು, ಶಿವಮೊಗ್ಗ ಮಂಡ್ಯ ಚಿತ್ರದುರ್ಗ ದಾವಣಗೆರೆ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ