Belagavi NewsBelgaum NewsKannada NewsKarnataka News

*ಯುಗಾದಿಗೂ ಮುನ್ನವೇ ಮಳೆಯ ಸಿಂಚನ: ಎರಡು ದಿನ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ : ಬಿರುಬೇಸಿಗೆಯ ಧಗೆಗೆ ಈಗಾಗಲೆ ರಾಜ್ಯದ ಹಲವು ಜಿಲ್ಲೆಯಲ್ಲಿ ಮಳೆಯಾಗಿದ್ದು, ಮುಂದಿನ ಎರಡು ದಿನ ಮತ್ತೆ ಬಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ರಾಜ್ಯದ 12ಕ್ಕೂ ಹೆಚ್ಚು ಜಿಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಮುಂದಿನ 2 ದಿನ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯುಗಾದಿಗೂ ಮುನ್ನವೇ ಮಳೆಯ ಸಿಂಚನ ರೈತಾಪಿ ವರ್ಗಕ್ಕೆ ಸಂತಸ ತಂದಿದೆ.

Home add -Advt

ಗುಡುಗು, ಸಿಡಿಲು ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಬೇಸಿಗೆಯ ಧಗೆ ಕೊಂಚ ತಣ್ಣಗಾಗಿ ಭೂಮಿ ತಂಪಾಗಿದೆ.

ಹಾಸನ ಜಿಲ್ಲೆಯ ಆಲೂರು ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಬಿರುಗಾಳಿಗೆ ಮರದ ರಂಬೆ-ಕೊಂಬೆಗಳು ಧರೆಗುರುಳಿವೆ. ಹಾಗೆಯೇ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸುತ್ತಮುತ್ತಲಿನ ಭಾಗಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆಯಾಗಿದ್ದು, ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ತಂಪಿನ ಅನುಭವ ನೀಡಿದೆ.

ಮೈಸೂರು ಜಿಲ್ಲೆಯ ಬೆಟ್ಟದಪುರ ಹಾಗೂ ಮೈಸೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ದಾವಣಗೆರೆ, ಹರಿಹರ, ಹೊನ್ನಾಳಿ, ವಿಜಯನಗರ ಜಿಲ್ಲೆಯ ಕೊಟ್ಟೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೇಹೊನ್ನೂರು ಭಾಗಗಳಲ್ಲಿಯೂ ಉತ್ತಮ ಮಳೆಯಾದ ವರದಿಯಾಗಿದೆ.

Related Articles

Back to top button