Belagavi NewsBelgaum NewsKannada NewsKarnataka News

*ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಮತ್ತು ನಾಳೆ ಕರಾವಳಿ ಭಾಗದ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

Home add -Advt

ಇಂದು ಕರಾವಳಿ ಕರ್ನಾಟಕ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜೊತೆಗೆ ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು

ಆಗಸ್ಟ್ 18ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 

ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. 

Related Articles

Back to top button