
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 17ರ ವರೆಗೆ ಬೆಳಗಾವಿ ಸೇರಿದಂತರ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ಇದರೊಂದಿಗೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಇಂದು ಮಲ್ಲೇಶ್ವರಂನಲ್ಲಿ ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.