
ಪ್ರಗತಿವಾಹಿನಿ ಸುದ್ದಿ: ಶ್ರೀಲಂಕಾದ ಪೂರ್ವ ಕರಾವಳಿ ಹಾಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯುಂಟಾಗಿದ್ದು, ಕರ್ನಾಟಕ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ನಾಳಿಯು ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ