
ಪ್ರಗತಿವಾಹಿನಿ ಸುದ್ದಿ: ಬಂಗಾಳ ಕೊಲ್ಲಿಯ ನೈರುತ್ಯದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಬೆಂಗಳೂರು ಸೇರಿ ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದೆಡೆ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಡಿ.2ರಂದು ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೇರಿ 10 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಡಿ.3 ರಂದು 12 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ