Belagavi NewsBelgaum NewsKannada NewsKarnataka NewsNationalPolitics

*ರಾಜ್ಯದ ಹಲವು ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಭಾಗದಲ್ಲಿ ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಸೂಚನೆ ನೀಡಿದೆ.

ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 29 ಮತ್ತು 30ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯೂ ಇದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 30ರಂದು ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜುಲೈ 29 ಮತ್ತು 30ರಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ಬಳ್ಳಾರಿ ಹಾಗೂ ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button