Belagavi NewsBelgaum NewsKannada NewsKarnataka NewsLife StyleNational

*ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ: ಯೆಲ್ಲೋ ಅಲರ್ಟ್ ಘೋಷಣೆ* 

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆಯ ಅಕಾಲಿಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿ ಮುನ್ಸೂಚನೆ ನೀಡಿದೆ. 

ಬೆಳಗಾವಿ ಸೇರಿದಂತೆ 12ಕ್ಕೂ ಹೆಚ್ಚು  ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆಯಾಗಿ ಅವಾಂತರ ಸೃಷ್ಟಿಯಾಗಿದೆ.

Home add -Advt

ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಉತ್ತರ ಕನ್ನಡ, ಬೀದರ್, ಧಾರವಾಡ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಂಭವವಿದೆ.

ಹಾಸನ, ತುಮಕೂರು, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಮೇ. 6 ರಿಂದ ಅಕಾಲಿಕ ಮಳೆ ಮುಂದುವರೆಯುವ ಸಂಭವವಿದ್ದು ತರಕಾರಿ ಹಾಗೂ ಹಣ್ಣು ಬೆಳೆಗಾರರು ಅಕಾಲಿಕ ಮಳೆಯಿಂದ ನಷ್ಟಕ್ಕೀಡಾಗಿದ್ದಾರೆ.

Related Articles

Back to top button