Karnataka News

*ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಒಣಹವೆ ಆವರಿಸಿದ್ದು, ಡಿ.17 ರಿಂದ ಮುಂದಿನ 5 ದಿನಗಳ ಕಾಲ ಕೆಲ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಡಿ.17 ಹಾಗೂ ಡಿ.18 ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಒಣ ಹವೆ ಇರುವ ಸಾಧ್ಯತೆ ಇದೆ.

ಡಿ.19 ಹಾಗೂ ಡಿ 20 ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಇನ್ನು ಡಿ. 21 ರಂದು ಚಿಕ್ಕಮಗಳೂರು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು ಯಾದಗಿರಿ, ರಾಯಚೂರು, ತುಮಕೂರು, ಬೀದರ್, ಕಲಬುರಗಿ, ಬಳ್ಳಾರಿ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವೆ ಇರುವ ಸಾಧ್ಯತೆ ಇದೆ.

Related Articles

Back to top button