ಪ್ರಗತಿವಾಹಿನಿ ಸುದ್ದಿ : ಫೆಂಗಲ್ ಚಂಡಮಾರುತ ದುರ್ಬಲವಾಗಿದ್ದರೂ ಅದರ ಪ್ರಭಾವ ಇನ್ನೂ ಕಡಿಮೆಯಾಗಿಲ್ಲ, ಕರ್ನಾಟಕದ ಹಲವೆಡೆ ಡಿಸೆಂಬರ್ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಗಲ್ ಚಂಡಮಾರುತದ ದುರ್ಬಲವಾಗುತ್ತಿದೆ, ಆದರೂ ಕರ್ನಾಟಕದಾದ್ಯಂತ ಮಳೆಗೆ ಕಾರಣವಾಗುತ್ತಿದೆ. ಕರ್ನಾಟಕದ ಕರಾವಳಿ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.
ಚಂಡಮಾರುತದ ವೇಗ ಕಡಿಮೆಯಾಗಿದೆ. ಗಾಳಿಯ ವೇಗ ತಗ್ಗಿದೆ. ಆದ್ರೆ ಅಲ್ಲಲ್ಲಿ ಸೃಷ್ಟಿಯಾಗಿರೋ ಸುಳಿ ಅಕಾಲಿಕ ಮಳೆಗೆ ಕಾರಣವಾಗಲಿದೆ ಎಂದು ಅಂದಾಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ