Kannada NewsKarnataka NewsLatest

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಉಡುಪಿ, ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ದಕ್ಷಿಣ ಹಾಗೂ ಉತ್ತರ ಒಳನಾಡು, ಮಧ್ಯ ಕರ್ನಾಟಕದ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗ, ಉತ್ತರ ಕನ್ನಡದ ಪೂರ್ವಭಾಗ, ಧಾರವಾಡ, ಹಾವೇರಿ, ಗದಗ, ವಿಜಯನಗರ ಜಿಲ್ಲೆಗೆ ಸಾಧಾರಣ ಮಳೆಯಾಗಬಹುದು. ಮೈಸೂರು, ಚಾಮರಾಜನಗರ, ಮಂಡ್ಯದ ದಕ್ಷಿಣ – ಪಶ್ಚಿಮ, ಚಿತ್ರದುರ್ಗ, ಬಳ್ಳಾರಿ, ಹುಬ್ಬಳ್ಳಿ ಧಾರವಾಡ ಉತ್ತರ ಭಾಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.

Home add -Advt

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button