Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿ ಸೇರಿದಂತೆ ಹಲವೆಡ ಇಂದು ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವ ಮಲೆನಾಡು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬೆಳಗಾವಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಮಳೆಯಾಗಲಿದೆ.

Home add -Advt

ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸಹ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಆಂತರಿಕ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಇಂದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದೆ. ಇನ್ನು ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಉಳಿದಂತೆ, ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜೋರಾದ ಗಾಳಿ ಬೀಸುವ ಸಾಧ್ಯತೆ ಇದೆ.

Related Articles

Back to top button