Karnataka NewsLatest

*ಭಾರಿ ಮಳೆಗೆ ಕುಸಿದು ಬಿದ್ದ ಮನೆ: ಒಂದೂವರೆ ವರ್ಷದ ಮಗು ಸಾವು; ಹಲವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲ್ಲಿ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಮನೆ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಶಾಂತಿ ಮೃತ ಮಗು. ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನ ಅಸ್ಥಳಕ್ಕೆ ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಗಂಗಾವತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button