Belagavi NewsBelgaum NewsKannada NewsKarnataka NewsPolitics

*ರಾಜ್ಯದ 17 ಜಿಲ್ಲೆಯಲ್ಲಿ ಇಂದು ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಸತತವಾಗಿ ಮಳೆಯಾಗುತ್ತಿದ್ದು, ಇಂದು ಸಹ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಮಾರುತಗಳು ಸಕ್ರಿಯವಾಗಿವೆ. ಇಂದು ಪ್ರಮುಖವಾಗಿ ದಾವಣಗೆರೆ, ಶಿವಮೊಗ್ಗ ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಸೇರಿದಂತೆ ಒಟ್ಟು 17 ಜಿಲ್ಲೆಗಳ ಹಲವೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮೂಲಕ ಹವಾಮಾನವು ಆಹ್ಲಾದಕರವಾಗಿರಲಿದೆ. ಇನ್ನು ಉತ್ತರ ಕರ್ನಾಟಕದ ಭಾಗದಲ್ಲಿ ಬಿಸಿಲಿನ ಬೇಗೆ ಮುಂದುವರೆಯಲಿದ್ದು, ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button