Belagavi NewsBelgaum NewsKannada NewsKarnataka News

*ನಾಳೆ ರಾಜ್ಯದ ಹಲವು ಜಿಲ್ಲೆಯಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ : ತಮಿಳುನಾಡು ಕರಾವಳಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 18ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಸದ್ಯ ಹವಾಮಾನ ಬದಲಾವಣೆಯಿಂದ ಚಳಿ ಕೊಂಚ ಕಡಿಮೆಯಾಗಿದ್ದು, ಅಲ್ಲಲ್ಲಿ ಬಿಸಿಲು ಹಾಗೂ ಒಣಹವೆ ಮುಂದುವರಿದಿದೆ. ಈ ನಡುವೆ ಸೈಕ್ಲೋನ್ ಎಫೆಕ್ಟ್ ನಿಂದ ಮಳೆ ಆಗಲಿದೆ ಎನ್ನಲಾಗಿದೆ. ಜನವರಿ ಅಂತ್ಯಕ್ಕೆ ಚಳಿ ಸಂಪೂರ್ಣ ಕಡಿಮೆಯಾಗಲಿದ್ದು ಈ ಬಾರಿ ಸೂರ್ಯನ ಪ್ರಖರ ಶಾಕ ಹೆಚ್ಚಿರಲಿದೆ ಎನ್ನಲಾಗುತ್ತಿದೆ.

ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬೀದ‌ರ್, ಧಾರವಾಡ, ಗದಗ, ದಾವಣಗೆರೆ, ಕೋಲಾರ, ಮಂಡ್ಯ ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button