Kannada NewsKarnataka NewsLatest

ಅ.10, 11ರಂದು ಹಲವು ಜಿಲ್ಲೆಗಳಲ್ಲಿ ಮಳೆ ಸಂಭವ; ಯೆಲ್ಲೊ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯಾದ್ಯಂತ ಹಿಂಗಾರು ಮಳೆ ಚುರುಕುಗೊಳ್ಳುತ್ತಿದ್ದು ದಕ್ಷಿಣ ಹಾಗೂ ಭಾಗಶಃ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.10 ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅ.11 ರಂದು ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

Home add -Advt

ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕ್ಷೀಣ ಹಿಂಗಾರು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button