
ಪ್ರಗತಿವಾಹಿನಿ ಸುದ್ದಿ: ಇಂದು ಬೆಂಗಳೂರಲ್ಲಿ ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯ ನಡೆಯಲಿದ್ದು, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕ ಶುರುವಾಗಿದೆ.
ಏಪ್ರಿಲ್ 3 ರಿಂದ 11ರ ವರೆಗೆ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು ನಾಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಏಪ್ರಿಲ್ 2, 3 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.