Latest

ರಾಜ್ಯದ ವಿವಿಧೆಡೆ ಜೂ.2ರವರೆಗೆ ಮಳೆ; ಹಲವೆಡೆ ಯೆಲ್ಲೋ ಅಲರ್ಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ವಿವಿಧೆಡೆ ಜೂ. 2ರವರೆಗೆ ವ್ಯಾಪಕ ಮಳೆಯಾಗಲಿದ್ದು ಅಂಥ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

Home add -Advt

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟ, ಕೊಪ್ಪಳ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ತಂಪು ಗಾಳಿಯ ಬೀಸುವಿಕೆ ಇರಲಿದೆ. ರಾಯಚೂರು ಸೇರಿದಂತೆ ಕೆಲವೆಡೆ ಮಾತ್ರ ಉಷ್ಣಾಂಶದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://pragati.taskdun.com/no-de-notification-can-be-done-d-k-shivakumar/
https://pragati.taskdun.com/nitin-gadkar-gifted-a-saree-to-shashikala-jolla/
https://pragati.taskdun.com/demand-for-the-arrest-of-those-who-won-for-pakistan/

Related Articles

Back to top button