
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಮನೆಗಳಿಗೆ ನುಗ್ಗಿದೆ.
ನಿನ್ನೆ ಸಾಯಂಕಾಲ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರದ ಮಜಗಾಂವ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಚರಂಡಿ ಸರಿಪಡಿಸಿಲ್ಲ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದಕ್ಕೆ ಮಳೆಯ ನೀರು ಮನೆಯೊಳಗೆ ನುಗ್ಗುತ್ತಿದೆ. ಮನೆಯ ಅಡುಗೆ ಕೋಣೆಗೆ ನೀರು ಬಂದಿದ್ದರಿಂದ ಮನೆಯಲ್ಲಿರುವ ದಿನಬಳಕೆಯ ವಸ್ತುಗಳು ನೀರಿನಲ್ಲಿ ನೆನೆದಿವೆ. ಹೀಗಾಗಿ ಸೂಕ್ತ ಚರಂಡಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳಿಯ ಜನರು ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ