Belagavi NewsBelgaum NewsKannada NewsKarnataka News

*ಮೇ 9 ರವರೆಗೆ ಗುಡುಗು ಬಿರುಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮೇ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಮತ್ತು ಬಿರುಗಾಳಿ ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಉಳಿದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಗುಡುಗು-ಮಿಂಚಿನ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Home add -Advt

ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಅಬ್ಬರ ಇರುವುದಿಲ್ಲ. ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯ ಒಣಹವೆ ಇದ್ದರೂ, ಮೇ 5ರಿಂದ ಪರಿಸ್ಥಿತಿಯಲ್ಲಿ ಬದಲಾವಣೆಯಾಗಲಿದೆ. ಕೊಪ್ಪಳ, ಯಾದಗಿರಿ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button