ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿರು ಬೇಸಿಗೆ ನಡುವೆ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ತಾಪಮಾನ ದಾಖಲಾಗಿದೆ. ಇನ್ನು ಮುಂದಿನ 5 ದಿನಗಳವರೆಗೆ ದೇಶದ ಹವಾಮಾನ ಮಾದರಿಯಲ್ಲಿ ಹೆಚ್ಚಿನ ಬದಲಾವಣೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ