Kannada NewsKarnataka NewsLatest
ಆಸ್ಪತ್ರೆಗೆ ತೆರಳಿ ಪತ್ನಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದರು.
ಇಂದು ದೆಹಲಿಗೆ ತೆರಳಲಿದ್ದ ಸಿದ್ದರಾಮಯ್ಯನವರು ಪ್ರವಾಸಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಪಾರ್ವತಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸದ್ಯ ಯಾವುದೇ ಸಮಸ್ಯೆ ಇಲ್ಲ” ಎಂದು ಹೇಳಿ ಆಸ್ಪತ್ರೆಯಿಂದ ನಿರ್ಗಮಿಸಿದರು. ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲೇ ಉಳಿದು ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ.
ಪಾರ್ವತಿ ಅವರು ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಮಂಗಳವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಎಂಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ.




