Belagavi NewsBelgaum NewsKannada NewsKarnataka NewsNational

*ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ: ಆ.13ರ ವರೆಗೆ ಬಿಳಲಿದೆ ಹಗುರವಾದ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ  ಆಗಸ್ಟ್ 13 ರವರೆಗೆ ಕರಾವಳಿ ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಸಹ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸಮುದ್ರ ತೀರದಲ್ಲಿ ಸಾಧಾರಣ ವೇಗದ ಗಾಳಿ ಬೀಸುವ ಸಾಧ್ಯತೆ ಇರುವ ಕಾರಣ ಮೀನುಗಾರರಿಗೆ ಜಾಗ್ರತೆ ವಹಿಸಲು ಸೂಚಿಸಲಾಗಿದೆ.

Home add -Advt

ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವೆ ಮುಂದುವರಿಯಲಿದೆ. ಆದರೆ ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೋಡಕವಿದ ವಾತಾವರಣವಿದ್ದು ಒಂಟಿ-ಎರಡು ಕಡೆಗಳಲ್ಲಿ ಜಿಟಿಜಿಟಿ ಮಳೆಯಾಗಬಹುದು. 

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಭಾಗಶಃ ಥಂಡಿ ವಾತಾವರಣವಿರಲಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ ಸಾಧಾರಣ ಪ್ರಮಾಣದಲ್ಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವೆಡೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಇಡೀ ರಾಜ್ಯದಲ್ಲಿ ಆಗಸ್ಟ್ ಮೂರನೇ ವಾರದ ವೇಳೆಗೆ ಮುಂಗಾರು ಮತ್ತೆ ಚುರುಕುಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಯಾವುದೇ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ನೆಚ್ಚರಿಕೆ ಅಥವಾ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿಲ್ಲ.

Related Articles

Back to top button