Belagavi NewsBelgaum NewsKannada NewsKarnataka News

*ಈ ದಿನಾಂಕದ ಬಳಿಕ ರಾಜ್ಯದಲ್ಲಿ ಹೆಚ್ಚಲಿದೆ ಮಳೆ ಪ್ರಮಾಣ: ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಒಂದು ವಾರ ಸ್ವಲ್ಪ ಬ್ರೇಕ್ ಕೊಟ್ಟಿದ್ದ ಮಳೆರಾಯ ರಾಜ್ಯದ ಅನೇಕ ಕಡೆ ಮತ್ತೆ ಅಬ್ಬರಿಸಿ ಬೊಬ್ಬಿರಿಸಲು ಮುಂದಾಗಿದ್ದಾನೆ. ಜೂನ್. 26ರ ಬಳಿಕ ರಾಜ್ಯದಲ್ಲಿ ಅಧಿಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಾದ್ಯಂತ ಮತ್ತೆ ಮಳೆಯ ಪ್ರಮಾಣ ಹೆಚ್ಚಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದಿನಿಂದಲೇ ಮಳೆ ಹೆಚ್ಚಾಗಲಿದ್ದು ಜೂನ್ 26ರ ಬಳಿಕ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ರಾಜ್ಯದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮತ್ತೊಂದೆಡೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button