Kannada NewsKarnataka News

*ಈ ಐದು ಜಿಲ್ಲೆಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಮಳೆ: ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಬಿಟ್ಟು ಬಿಡದೆ ಸುರಿಯುತ್ತಿದ್ದು, ಜನರು ಕಂಗಾಲಾಗಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ,ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ,ಐಟಿಐ ಹಾಗೂ ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ಇವತ್ತು ಇಂದು ರಜೆ ಘೋಷಿಸಿ ಆದೇಶ ಹೊರಡಿಸಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಮಾತ್ರ ಎಂದಿನಂತೆ ನಡೆಯಲಿದೆ. ಮುನ್ನೆಚ್ಚರಿಕೆ ವಹಿಸುವಂತೆ ಎಲ್ಲಾ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button