Latest

ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಾ.27ರ ವರೆಗೂ ಮೋಡ ಕವಿದ ವಾತಾವರಣ ಇರಲಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯದ ಕೃಷಿ ಹವಾಮಾನ ಶಾಸ್ತ್ರ ಇಲಾಖೆ ಮುನ್ಸೂಚನೆ ನೀಡಿದೆ.

ಮಾ.24 ಹಾಗೂ 25ರಂದು ಮೋಡ ಕವಿದ ವಾತಾವರಣ ಇರಲಿದ್ದು, ಮಾ. 26 ಹಾಗೂ 27ರಂದು ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.

Home add -Advt

ಈಗಾಗಲೇ ರಾಜ್ಯದ ಹಲವು ಕಡೆ ಮಳೆ ಸುರಿಯುತ್ತಿದೆ. ಅಸನಿ ಚಂಡಮಾರುತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ನಾಲ್ಕು ದಿನಗಳಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

Related Articles

Back to top button