Kannada NewsKarnataka NewsLatest

*ಒಂದು ವಾರ ದೇಶಾದ್ಯಂತ ಮಳೆ ಮುಂದುವರಿಕೆ*

ಪ್ರಗತಿವಾಹಿನಿ ಸುದ್ದಿ: ವಿವಿಧ ಭಾಗದಲ್ಲಿ ನೈರುತ್ಯ ಮಾನ್ಸೂನ್ ಅಂತ್ಯವಾಗುತ್ತಿದೆ. ಆದರೆ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಅಕ್ಟೋಬ‌ರ್ 5ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ತುಮಕೂರು, ಧಾರವಾಡ, ರಾಯಚೂರು, ಬಳ್ಳಾರಿ, ಕೊಡಗು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಅ. 6 ರವರೆಗೆ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ವಿಜಯಪುರ, ರಾಯಚೂರು, ಯಾದಗಿರಿ ಮತ್ತು ಕೊಪ್ಪಳ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.

ಅಲ್ಲದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ 30-40 ಕಿಮೀ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಬಂಗಾಳಕೊಲ್ಲಿಯಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತ ರೂಪುಗೊಂಡಿರುವ ಪ್ರಭಾವದಿಂದಾಗಿ ಒಡಿಶಾ – ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಆಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇನ್ನೂ ಒಂದು ವಾರದ ಅವಧಿಗೆ ದೇಶಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆ ಇದೆ. 

Related Articles

Back to top button