Karnataka News

*ರಾಜ್ಯದಲ್ಲಿ ಮತ್ತೆ ಹೆಚ್ಚಾಗಲಿದೆ ಮಳೆ: 22 ಜಿಲ್ಲೆಗಳಿಗೆ ಯೇಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ  ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದ 22 ಜಿಲ್ಲೆಗಳಿಗೆ ಯೇಲ್ಲೋ ಅಲರ್ಟ್ ಘೋಷಿಸಿದೆ.

ಮೇ 22ರವರೆಗೆ ಉಡುಪಿ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 30-40 ಕಿಮೀ ವೇಗದ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡುಗಳಲ್ಲಿ ಹಗುರದಿಂದ ಮಳೆ ಸಾಧ್ಯತೆಯಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂಬ ಎಚ್ಚರಿಕೆಯಿದೆ.

Home add -Advt

ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಹಾಸನ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮವಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನದಿಯಂತಿರುವ ರಸ್ತೆಗಳು ಜನರಲ್ಲಿ ಆತಂಕವನ್ನು ಉಂಟುಮಾಡಿವೆ.

ಸರ್ಕಾರಿ ಅಧಿಕಾರಿಗಳು ಸೇರಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೂಡ ಕಾರ್ಯಚರಣೆಯಲ್ಲಿ ತೊಡಗಿದ್ದು, ತಾತ್ಕಾಲಿಕ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆದರೆ ಮುನ್ನೆಚ್ಚರಿಕಾ ಕ್ರಮಗಳು ಕಡಿಮೆ ಇದ್ದ ಕಾರಣ ಪರಿಸ್ಥಿತಿ ಬಿಕ್ಕಟ್ಟಾಗಿ ಪರಿಣಮಿಸಿದೆ.

Related Articles

Back to top button