Belagavi NewsBelgaum NewsKannada NewsKarnataka NewsPolitics

*ರಾಜ್ಯದ ಈ ಭಾಗದಲ್ಲಿ ಮಳೆ ಆರ್ಭಟ ಮುಂದುವರಿಕೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮಾತ್ರ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಐದು ದಿನಗಳ ಕಾಲ ಕರಾವಳಿ ತೀರ ಹಾಗೂ ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ.

Home add -Advt

ಮಳೆಯ ಜೊತೆಜೊತೆಗೆ ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ.

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ. 

ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಹದ ಮಳೆಯಾಗಲಿದ್ದು ಇಲ್ಲೂ ಸಹ ಗಾಳಿಯ ವೇಗ ಹೆಚ್ಚಿರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮುಂಬರುವ ದಿನಗಳಲ್ಲಿ ಈ ಭಾಗದಲ್ಲಿ ತುಂತುರು ಹನಿಗಳು ಬೀಳಲಿವೆ. ಆದರೆ, ಬೀದ‌ರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಇಂದು ಮಳೆಗಿಂತ ಬಿರುಗಾಳಿಯ ಅಬ್ಬರವೇ ಹೆಚ್ಚಾಗಲಿದೆ.

ಅದೇ ರೀತಿ ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ ಚಾಮರಾಜನಗರ ಹಾಗೂ ರಾಮನಗರ ಸೇರಿದಂತೆ ಸಿಲಿಕಾನ್ ಸಿಟಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲೂ ಇಂದು ಬಿರುಗಾಳಿಯ ತೀವ್ರತೆ ಹೆಚ್ಚಿರಲಿದೆ. 

Related Articles

Back to top button