
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಶನಿವಾರ ಸಂಜೆ ಸುರಿದ ಮಳೆಗೆ ಮರದ ಕೊಂಬೆಯೊಂದು ಬೈಕ್ ಮೇಲೆ ಮುರಿದು ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಜೀವನಹಳ್ಳಿಯ ಪೂರ್ವ ಪಾರ್ಕ್ ತಂದೆಯ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಮರವೊಂದು ಬಾಲಕಿ ರಕ್ಷಾ ಮೇಲೆ ಬಿದ್ದಿದೆ. ಮರ ಬಿದ್ದು ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.
ಘಟನೆಗೆ ಸಂಬಂಧಪಟ್ಟಂತೆ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.