
ಪ್ರಗತಿವಾಹಿನಿ ಸುದ್ದಿ : ವರುಣನ ಆರ್ಭಟ ಮತ್ತೆ ಜೋರಾಗಿರುವ ಹಿನ್ನೆಲೆಯಲ್ಲಿ ಮುನ್ನೆಚರಿಕಾ ಕ್ರಮಗಳಿಗೆ ಜಿಲ್ಲಾಡಳಿತ ಮುಂದಾಗಿದೆ. ಹಾಗಾಗಿ ಉಡುಪಿ ಹಾಗೂ ಮಂಗಳೂರಿನ ಕೆಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ಐಟಿಐ ಗಳಿಗೂ ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಹೀಗಾಗಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದ ಕಾರಣ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರೀ ಮಳೆಯಾಗಲಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ತಾಲೂಕಿನ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಆದೇಶ ಹೊರಡಿಸಿದ್ದಾರೆ.