Karnataka News

*ಬಿರುಗಾಳಿ ಮಳೆ: ತಡೆಗೋಡೆ ಕುಸಿದು ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸುತ್ತಿವೆ.

ಬಿರುಗಳಿ ಸಹಿತ ಮಳೆಯ ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಕದ ಮನೆಯ ತಡೆಗೋಡೆ ಕುಸಿದು ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಗಳೂರಿನ ಜೋಕಟ್ತೆ ಬಳಿ ಮನೆ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಅವಘಡದಲ್ಲಿ ಮೂಲ್ಕಿ ಕೊಲ್ನಾಡಿನ ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ ಎಂಬ 17 ವರ್ಷದ ಯುವಕ ಮೃತಪಟ್ಟಿದ್ದಾರೆ.

ಇನ್ನೊಂದೆಡೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಮಲೆಯ ಮೇಲೆ ಮರ ಬಿದ್ದ ಪರಿಣಾಪ ಭಾಗಶಃ ಮನೆ ಹಾನಿಯಾಗಿದ್ದು, ಅದೃಷ್ಟವಶಾತ್ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ಭಾಗದಲ್ಲಿ ಇನ್ನೊಂದು ಮನೆ ಮೇಲೆ ಅಡಿಕೆ ಮರಗಳು ಬಿದ್ದಿದ್ದು ಹಾನಿಯಾಗಿದೆ. ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button