ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಯೋಜನೆಗೆ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ರೈತ ಮಕ್ಕಳ ವಿದ್ಯಾಭಾಸ, ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, ಇದರಿಂದ 17 ಲಕ್ಷ ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ ಎಂದರು.
ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿದರು. ಕೃಷಿ ಸಚಿವ ಬಿ.ಸಿ. ಪಾಟೀಲ, ಸಚಿವ ಸಂಪುಟದ ಇತರ ಸದಸ್ಯರಾದ ಪ್ರಭು ಚೌವ್ಹಾಣ್, ಎನ್. ಮುನಿರತ್ನ, ಬಿ.ಸಿ. ನಾಗೇಶ್, ಸಾವಯವ ಕೃಷಿ ಕುರಿತ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಎ.ಎಸ್. ಆನಂದ್, ಸಂಸದರು, ಶಾಸಕರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಬೆಳಗಾವಿಗೆ ಭೇಟಿ ನೀಡಿದ ಕೇಂದ್ರ ನೆರೆ ಅಧ್ಯಯನ ತಂಡ; ಮನೆ, ಬೆಳೆ ಹಾನಿ ಪರಿಶೀಲನೆ
ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ