Kannada NewsKarnataka NewsLatest

*ಬಸ್-ಬೈಕ್ ಭೀಕರ ಅಪಘಾತ: ವಿದ್ಯಾರ್ಥಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಸುಮಂತ್ (21) ಮೃತ ವಿದ್ಯಾರ್ಥಿ. ಸ್ನೇಹಿತನ ಮನೆಗೆಂದು ಬೈಕ್ ನಲ್ಲಿ ಹೋಗುತ್ತಿದ್ದಾಗ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸುಮಂತ್ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button