Karnataka News

*ಸಾರ್ವಜನಿಕರಿಗೆ ಗುಡ್ ನ್ಯೂಸ್: ರಾಜಭವನ ವೀಕ್ಷಣೆಗೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜನವರಿ 26 ಮತ್ತು 27 ರಂದು ರಾಜಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು.

ಪ್ರವೇಶದ ಸಮಯ:

ರಾಜಭವನಕ್ಕೆ ಸಂಜೆ 6 ರಿಂದ 7.30ರ ವರೆಗೆ ಪ್ರವೇಶಕ್ಕೆ ಸಮಯ ನಿಗದಿ ಮಾಡಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಕ್ಯಾಮರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ರಾಜಭವನದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ.

ಸಾರ್ವಜನಿಕರು ಭದ್ರತಾ ಸಿಬ್ಬಂದಿಗಳು ನೀಡುವ ಸೂಚನೆಗಳನ್ನು ಪಾಲಿಸಿ, ಸಹಕರಿಸಬೇಕಾಗಿ ಕೋರಿದೆ ಎಂದು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button