ಪ್ರಗತಿವಾಹಿನಿ ಸುದ್ದಿ; ಮುಂಬೈ: ಬ್ಲೂ ಫಿಲ್ಮ್ ದಂಧೆ ಆರೋಪದಡಿ ಬಂಧನಕ್ಕೀಡಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಲಾಗಿದೆ.
ರಾಜ್ ಕುಂದ್ರಾ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಮತ್ತೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ಇನ್ನಷ್ಟು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ನ್ಯಾಯಾಲಯ ಜುಲೈ 27ರವರೆಗೂ ಕುಂದ್ರಾರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ.
ಹಲವು ಆಪ್ ಗಳ ಮೂಲಕ ಬ್ಲೂಫಿಲ್ಮ್ ದಂಧೆ ನಡೆಸುತ್ತಿದ್ದರು. ಸೂಕ್ತ ದಾಖಲೆಗಳು ಸಿಕ್ಕ ಹಿನ್ನೆಲೆಯಲ್ಲಿ ಕುಂದ್ರಾರನ್ನು ಬಂಧಿಸಿದ್ದರು.
ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ; ವಿವಿಧ ಜಲಾಶಯಗಳ ಸ್ಥಿತಿ ಗತಿ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ